ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ಮಹಾತ್ಮ ಗಾಂಧೀಜಿಯವರ 156ನೇ ಜನ್ಮದಿನ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಗೌರವ ಸಮರ್ಪಿಸಲಿದ್ದಾರೆ, ಮೈಸೂರಿನ ಗಾಂಧಿ ಸ್ಟೇರ್ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಂದಿಧ್ವಜ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4:42ಕ್ಕೆ ವಿಜಯದಶಮಿ ಮೆರವಣಿಗೆ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 7 ಗಂಟೆಗೆ ಬನ್ನಿ ಮಂಟಪದಲ್ಲಿ ಪಂಜಿನ ಕವಾಯತುನಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಇಂದು ಕೂಡ ಸಿದ್ದರಾಮಯ್ಯ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 11:25ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.