BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಯಲ್ಲಿ ಇಂದು ಸಂಚಾರ ನಿರ್ಬಂಧ | Traffic Advisory
Share
SHARE
ಬೆಂಗಳೂರು : ಬೆಂಗಳೂರು ನಗರ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ದಿನಾಂಕ:- 02.10.2025 ರಂದು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 5,00 ಕ್ಕೂ ಅಧಿಕ ದುರ್ಗಾದೇವಿ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವಿರುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ದಿನಾಂಕದಂದು ಮಧ್ಯಾಹ್ನ 12-00 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆವರೆಗೆ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.
ಸಂಚಾರ ನಿರ್ಬಂಧ:ಕೆನ್ಸಿಂಗ್ಟನ್-ಮರ್ಫೀ ರಸ್ತೆ, ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಣಸ್ವಾಮಿ ಮೊದಲಿಯಾರ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ. ಕೆನ್ಸಿಂಗ್ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚೆಟ್ಟಿ ರಸ್ತೆ – ಡಿಕನ್ಸನ್ ರಸ್ತೆ, ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ -ಪ್ರಾಮಿನೇಡ್ ರಸ್ತೆ-ವೀಲರ್ಸ್ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ. ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆನ್ಸ್ನ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ.
ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು. ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್ಟನ್ ರಸ್ತೆ-ಅಣ್ಣಸ್ವಾಮಿ ಮೊದಲೀಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್ ಅನ್ನು ದಿನಾಂಕ: 02/10/2025 ರಂದು ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧ ಮಾಡಲಾಗಿರುತ್ತದೆ.