ಮೈಸೂರು : ಮೈಸೂರಿನಲ್ಲಿ ‘ಜಂಬೂಸವಾರಿ’ ನೋಡಲು ನಕಲಿ ಪಾಸ್ ಪಡೆದು ಬಂದಿದ್ದ ಭೂಪನೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಕಲಿ ಪಾಸ್ ತೋರಿಸಿ ಒಳಗೆ ನುಗ್ಗಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೈಸೂರಿನಲ್ಲಿ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.ಸಂಜೆ 4:42 ರಿಂದ 5 :06 ರೊಳಗೆ ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗಣ್ಯರು ಸೇರಿದಂತೆ ಲಕ್ಷಾಂತರ ಜನ ಜಂಬೂ ಸವಾರಿ ಕಣ್ತುಂಬಿಕೊಳ್ಳಲಿದ್ದಾರೆ. ಈ ಬಾರಿ ಜಂಬೂ ಸವಾರಿಯಲ್ಲಿ 58 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳಲಿದೆ. 100ಕ್ಕೂ ಹೆಚ್ಚು ಕಲಾ ತಂಡಗಳು, 60ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್ ಹಾಗೂ ಪೊಲೀಸ್ ತುಕಡಿಗಳು ಸಾಗಲಿವೆ.