ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಮೋದಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಖರ್ಗೆ ಜೀ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದೆ. ಅವರ ನಿರಂತರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಖರ್ಗೆ ಅವರಿಗೆ ಪೇಸ್ಮೇಕರ್ ಅಳವಡಿಸಲು ಸೂಚಿಸಲಾಗಿದ್ದು, ಜಿತ ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ಥಿರರಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

