ಬೆಂಗಳೂರು: ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಇತ್ತೀಚೆಗೆ ನಡೆದ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ರಸ್ತೆ ಹಾಳಾಗಿದ್ದರಿಂದ ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ಲಾರಿ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಎಸ್ಕೇಪ್ ಆಗಿದ್ದನು. . ಸದ್ಯ ಹಿಟ್ & ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನ ಪೊಲೀಸರು ಬಂಧಿಸಿದ್ದಾರೆ.