ಬೆಂಗಳೂರು : 5 ವರ್ಷ ಸಿದ್ದರಾಮಯ್ಯನವರೇ ರಾಜ್ಯದ ಸಿಎಂ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಇರುತ್ತಾರೆ. ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಅಂತ ಹೇಳಿದ್ದಾರೆ. ಡಿಕೆಶಿ ಹೇಳಿದ ಮೇಲೆ ಮುಗೀತು, ಬದಲಾವಣೆ ಇಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಕೂಡ ನಾನೇ 5 ವರ್ಷ ಸಿಎಂ ಎಂದು ಹೇಳಿರುವಾಗ ಬದಲಾವಣೆ ಮಾತೇ ಇಲ್ಲ, ನವೆಂಬರ್ ನಲ್ಲಿ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ ಎಂದರು.
ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಸಚಿವರು ‘ ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಯಾವಾಗ ಬೇಕಾದರೂ ಸಂಪುಟ ವಿಸ್ತರಣೆ ಆಗಬಹುದು ಎಂದು ಅವರು ಹೇಳಿದರು.