BREAKING : ವಿಶ್ವವಿಖ್ಯಾತ ‘ಮೈಸೂರು ದಸರಾ’ ಮೆರವಣಿಗೆ ಆರಂಭ : ಗಮನ ಸೆಳೆದ ಸರ್ಕಾರದ ಶಕ್ತಿ ಯೋಜನೆಯ ಸ್ತಬ್ದಚಿತ್ರ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮೆರವಣಿಗೆ ಆರಂಭವಾಗಿದ್ದು, ವಿವಿಧ 58 ಸ್ತಬ್ದಚಿತ್ರಗಳು ಪ್ರದರ್ಶನಗೊಳ್ಳುತ್ತಿದೆ.

ಈ ಬಾರಿ 58 ಸ್ಥಬ್ದಚಿತ್ರಗಳು ಸೇರಿ 150 ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದೆ. ವಿವಿಧ ಜಿಲ್ಲೆಗಳ ಸ್ಥಬ್ದಚಿತ್ರಗಳು ಕಲಾತಂಡಗಳು ಮೆರವಣಿಗೆಯಲ್ಲಿ ಜನಮನ ಸೂರೆಗೊಳಿಸಲಿದೆ. ಈ ವರ್ಷದ ಮೆರವಣಿಗೆಯಲ್ಲಿ ಶಕ್ತಿ ಯೋಜನೆಯ ಸ್ತಬ್ಧಚಿತ್ರವು ವಿಶೇಷವಾಗಿ ಗಮನ ಸೆಳೆಯುತ್ತಿದೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಸ್ತಬ್ಧಚಿತ್ರಗಳನ್ನು ವಿನ್ಯಾಸಗೊಳಿಸಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಭ ಧನುರ್ ಲಗ್ನದಲ್ಲಿ ನಂದಿ ಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ನೆರವೇರಿಸಿದ್ದಾರೆ.ಮೈಸೂರು ಅರಮನೆ ಬಲರಾಮ ದ್ವಾರದ ಬಳಿ ಈಡುಗಾಯಿ ಒಡೆದು ನಂದಿ ಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮತ್ತಿತರರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read