ಗಾಂಧಿ ಭವನದಲ್ಲಿ ಗಾಂಧೀಜಿಯವರ 156 ನೇ ಜಯಂತಿ : ವಿವಿಧ ಧರ್ಮ ಗುರುಗಳಿಂದ ಸರ್ವಧರ್ಮ ಪ್ರಾರ್ಥನೆ

ಧಾರವಾಡ : ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ, ಸ್ವದೇಶಿ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಮಹಾತ್ಮಾ ಗಾಂಧೀಜಿಯವರು ಭಾಗವಹಿಸಿದ್ದರು. ಆಂದೋಲನವನ್ನು ಜನಾಂದೋಲವಾಗಿ ಪರಿವರ್ತಿಸಿದರು. ಜನ ಸಾಮಾನ್ಯರಿಂದ ಹೋರಾಟ ನಡೆಸಿದರು. ಅನೇಕ ಸತ್ಯಾಗ್ರಹಗಳನ್ನು ಜನಾಂದೋಲದಿಂದ ನಡೆಸಿದ ಕೀರ್ತಿ ಗಾಂಧೀಜಿ ಅವರಿಗೆ ಸಲ್ಲುತ್ತದೆ. ಗಾಂಧೀಜಿಯವರು ದೇಶ ನೆನಪಿಡುವ ಐಕಾನ್ ಆಗಿದ್ದಾರೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು.

ಅವರು ಇಂದು (ಅ.2) ಬೆಳಿಗ್ಗೆ ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಾತ್ಮಾ ಗಾಂಧಿಯವರ 156 ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 124 ನೇ ಜಯಂತಿಯನ್ನು ಇಂದು ನಾವು ಆಚರಿಸುತ್ತಿದ್ದೇವೆ. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಪ್ರಧಾನ ಮಂತ್ರಿಗಳಾಗಿ ಉತ್ತಮ ಆಡಳಿತವನ್ನು ನೀಡಿದರು. ತಾμÉ್ಕಂಟ್ ಒಪ್ಪಂದದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಶಾಸ್ತ್ರಿಯವರು ಜೀವನದ ನೈತಿಕತೆ ತಿಳಿದು ಜೀವನ ಸವೆಸಿದ್ದಾರೆ ಎಂದು ಹೇಳಿದರು.

ಉತ್ತರ ಭಾರತದಲ್ಲಿ ಪೇಟಾ ಹಾಕುವುದು ಸಾಮಾನ್ಯವಾಗಿತ್ತು, ಅದನ್ನು ಬ್ರಿಟಿಷರು ತೆಗೆದು ಹಾಕಿದರು. ಅನಂತರದಲ್ಲಿ ಗಾಂಧೀಜಿಯವರು ಟೋಪಿಗೆ ಹೆಚ್ಚಿನ ಮಹತ್ವ ತಂದುಕೊಟ್ಟರು. ನಂತರದ ದಿನಗಳಲ್ಲಿ ಗಾಂಧಿ ಟೋಪಿ ಎಂದು ಖ್ಯಾತಿ ಪಡೆದುಕೊಂಡಿತು ಎಂದು ಅವರು ಗಾಂಧಿ ಟೋಪಿ ಬಗ್ಗೆ ತಿಳಿಸಿದರು.
ಶಾಸಕರಾದ ಎನ್.ಎಚ್ ಕೋನರಡ್ಡಿ ಅವರು ಮಾತನಾಡಿ, ಗಾಂಧೀಜಿಯವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು. ಅವರ ರಾಜಕೀಯ ಆಡಳಿತ ವ್ಯವಸ್ಥೆ ನಮಗೆ ಮಾದರಿಯಾಗಿದೆ. ಸತ್ಯ ಮತ್ತು ಅಹಿಂಸೆ ಮಾರ್ಗದಲ್ಲಿ ಅವರು ನಡೆದರು. ಸತ್ಯಾಗ್ರಹ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವೀಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಗ್ರಾಮ ವ್ಯವಸ್ಥೆ ಮುಖ್ಯ. ಆರ್ಥಿಕ, ಸಾಮಾಜಿಕ ಸಮಾನತೆಗೆ ಮುಂದಾಗಬೇಕು ಎಂದರು.

ಗಾಂಧಿ ಚರಿತ್ರೆಯಲ್ಲಿ 1924 ರ ಬೆಳಗಾವಿ ಅಧಿವೇಶನ ಅತಿದೊಡ್ಡ ಮೈಲಿಗಲ್ಲಾಗಿದೆ. ಗಾಂಧಿ ತತ್ವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸರ್ವಧರ್ಮದ ಗುರುಗಳು ಭಾಗವಹಿಸಿದ ಸಮಾರಂಭ ಇದಾಗಿದೆ. ದೇಶ ಒಂದು ಎಂಬ ಭಾವನೆಯಲ್ಲಿ ನಾವು ಮುನ್ನೆಡಯಬೇಕು. ಗಾಂಧಿ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ಇಂದು ವಿಜಯದಶಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಹುಬ್ಬಳ್ಳಿ ಧಾರವಾಡ ಬೃಹತ್ ಬೆಂಗಳೂರು ಮಾದರಿಯಲ್ಲಿ ಬೆಳವಣಿಗೆಯಾಗಬೇಕು ಎಂದು ಶಾಸಕ ಎನ್ ಎಚ್ ಕೋನರಡ್ಡಿ ಅವರು ಆಶಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಗಾಂಧೀಜಿ ಅವರ ತತ್ವದಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೀವನ ಸವೆಸಿದ್ದಾರೆ. ಗಾಂಧೀಜಿಯವರ ಅಹಿಂಸೆ ತತ್ವ ನಮಗೆ ದಾರಿದೀಪವಾಗಿದೆ. ಅದೇ ಮಾರ್ಗದಲ್ಲಿ ನಾವು ನಡೆಯಬೇಕು. ದಸರಾ ಹಬ್ಬವನ್ನು ರಾಮನು ರಾವಣನ ಮೇಲೆ ಜಯ ಸಾಧಿಸಿದ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಗಾಂಧೀಜಿಯವರ ತತ್ವದಾರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಬಹಳ ಮಹತ್ವದ್ದಾಗಿದೆ. “ಮೈ ಎಕ್ಸಪೀರಿಮೆಂಟ್ ವಿಥ್ ಟ್ರುಥ್” ಎಂಬ ಗ್ರಂಥವನ್ನು ರಚಿಸಿದ್ದಾರೆ. ಶಾಲಾ ದಿನದಲ್ಲಿ ಮಾಡಿದ ತಪ್ಪನ್ನು ಜೀವನದಲ್ಲಿ ಎಂದಿಗೂ ಮಾಡುವುದಿಲ್ಲ ಎಂದು ಶಪಥ ಮಾಡಿದ್ದರು. ತಮ್ಮ ಜೀವನದುದ್ದಕ್ಕೂ ಸತ್ಯದ ದಾರಿಯಲ್ಲಿ ಅವರು ನಡೆದರು. ಅವರಂತೆ ನಾವು ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಜೀವನದಲ್ಲಿ ತ್ಯಾಗವನ್ನು ಸಹ ಅಳವಡಿಸಿಕೊಳ್ಳಬೇಕಾಗುತ್ತದೆ. ಒಳ್ಳೆಯ ನಾಗರಿಕರಾಗಲು ಮುಂದಾಗಬೇಕು. ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯ ನೀಡಿದರು. ಪಾಕಿಸ್ತಾನ ವಿರುದ್ಧ ಯುದ್ಧ ಸಂದರ್ಭದಲ್ಲಿ ಬಹಳ ಪ್ರಮುಖ ಪಾತ್ರ ನಿರ್ವಹಿಸಿದ್ದರು. ನಾವು ಸಹ ಸಮಾಜಕ್ಕೆ ಕೊಡುಗೆ ನೀಡಲು ಅಣಿಯಾಗಬೇಕು. ದೇಶದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದರು.

ಧಾರವಾಡ ಸಿದ್ಧವೀರ ಸತ್ಸಂಗದ ಅಧ್ಯಕ್ಷ ಹಾಗೂ ಗಾಂಧಿ ಚಿಂತಕ ಡಾ. ನಿತಿನ್ಚಂದ್ರ ಹತ್ತೀಕಾಳ ಅವರು ಮಾತನಾಡಿ, ಗಾಂಧೀಜಿ ರಾಷ್ಟ್ರಕ್ಕೆ ಸಿಮೀತವಾದ ವ್ಯಕ್ತಿ ಅಲ್ಲ. ಅವರು ವಿಶ್ವಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಮಹಾತ್ಮರು ಹಾಗೂ ಶರಣರು ಇಡೀ ನಾಡಿಗೆ ವಿಶೇಷ ಕೊಡುಗೆಗಳನ್ನು ನೀಡಿರುತ್ತಾರೆ. ನಮ್ಮ ಸಿದ್ಧವೀರ ಸತ್ಸಂಗದಿಂದ 1981 ಅಕ್ಟೋಬರ್ 2 ರಿಂದ ಗಾಂಧೀಜಿಯವರ ಜಯಂತಿಯನ್ನು ಆಚರಿಸುತ್ತಿದ್ದು, ಇಂದು 45 ನೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ದಕ್ಷಿಣ ಆಫ್ರಿಕಾದಲ್ಲಿ ಅಸ್ಪೃಶ್ಯತೆ ವಿರುದ್ಧ ಹೋರಾಡಿ ಜಯಸಿದರು. ಅಲ್ಲಿಂದ ಮರಳಿ ಭಾರತಕ್ಕೆ ಹಿಂತಿರುಗಿ ಸ್ವಾತಂತ್ರ್ಯ ಹೋರಾಟದಲ್ಲಿ ಧುಮಕಿದರು. ಮಹಾತ್ಮಾ ಎಂಬ ಹೆಸರು ಪಡೆದುಕೊಂಡರು. ಕ್ವಿಟ್ ಇಂಡಿಯಾ, ಚಲೇಜಾವ್ ಚಳುವಳಿ ಸೇರಿದಂತೆ ಅನೇಕ ಹೋರಾಟಗಳಲ್ಲಿ ಭಾಗಿಯಾದರು. ಆದರ್ಶ ನಾಯಕತ್ವದ ಗುಣಗಳನ್ನು ಗಾಂಧೀಜಿಯವರಲ್ಲಿ ನಾವು ಕಂಡೆವು. ಆಲ್ಬರ್ಟ್ ಐನಸ್ಟಿನ್ ಅವರು ಗಾಂಧೀಜಿಯವರನ್ನು ಹಾಡಿ ಹೊಗಳಿದ್ದಾರೆ. ಮಾರ್ಟಿನ್ ಲೂಥರ್ ಕಿಂಗ್ ಅವರು ನನಗೆ ಇಬ್ಬರೂ ದೇವರು ಎಂದು ಹೇಳಿದ್ದಾರೆ. ಜೀಸಸ್ ಯೇಸುಕ್ರಿಸ್ತ ಮೊದಲನೇ ದೇವರಾದರೆ, ಮಹಾತ್ಮಾ ಗಾಂಧಿ ನನಗೆ ಬದುಕುವ ಕಲೆ ಕಲಿಸಿದ ಎರಡನೇ ದೇವರಾಗಿದ್ದಾರೆ. ವಿರೋಧಿಸುವಿಕೆ, ಸ್ವೀಕಾರ ಮನೋಭಾವ, ರಿಯಲೈಜೇಷನ್ ಜೀವನದಲ್ಲಿ ಬಹುಮುಖ್ಯವಾಗಿವೆ. ಮಹಾತ್ಮಾ ಗಾಂಧಿಯವರ ಹತ್ಯೆ ನಡೆದ ದಿನ ವಿಶ್ವಸಂಸ್ಥೆಯ ಗೊತ್ತುವಳಿಯಿಂದ ಎಲ್ಲ ರಾಷ್ಟ್ರಗಳ ಧ್ವಜಗಳನ್ನು ಅರ್ಧಕ್ಕೆ ಹಾರಿಸಲಾಯಿತು ಎಂದು ತಮ್ಮ ವಿಶೇಷ ಉಪನ್ಯಾಸದಲ್ಲಿ ಅವರು ವಿವರಿಸಿದರು.

ವಿವಿಧ ಧರ್ಮದ ಧರ್ಮಗುರುಗಳಾದ ಡೇವಿಡ್, ಹಫೀಜ್ ಖಾದ್ರಿ ಮತ್ತು ಮಹೇಶ ಭಟ್ ಅವರು ಸರ್ವಧರ್ಮ ಪ್ರಾರ್ಥನೆಯನ್ನು ಸಲ್ಲಿಸಿದರು.ಗಣ್ಯರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುμÁ್ಪರ್ಪಣೆ ಅರ್ಪಿಸಿದರು. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read