HomeLatest Newsಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ: ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಪಕ್ಷ ವಿರೋಧಿ ಕೆಲಸವಾಗುತ್ತದೆ. ಅಧಿಕಾರ ಹಂಚಿಕೆ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ. ನಾನು ಮತ್ತು ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಮಾತಿಗೆ ಬದ್ಧವಾಗಿ ನಡೆಯುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುವ ಭರವಸೆ ಇದೆ ಎಂದು ಸಿಎಂ ಹೇಳಿಕೆ, ಕುಣಿಗಲ್ ಶಾಸಕ ಡಾ. ರಂಗನಾಥ್ ಅವರ ಪ್ರತಿಕ್ರಿಯೆ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ, ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದ ಹೈಕಮಾಂಡ್ ಆದೇಶದಂತೆ ಎಲ್ಲರೂ ನಡೆಯಬೇಕು ಎಂಬ ಮಾತನ್ನು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ,

ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ. ನನ್ನ ಪರವಾಗಿ ಆಗಲಿ, ಸಿದ್ದರಾಮಯ್ಯ ಪರವಾಗಿ ಆಗಲಿ ಮಾತನಾಡಿದರೆ ಪಕ್ಷಕ್ಕೆ ಹಾನಿ ಮಾಡಿದಂತೆ. ಈ ರೀತಿ ಹೇಳಿಕೆ ನೀಡಿದವರಿಗೆ ನೋಟಿಸ್ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಸೂಚನೆ ನೀಡಿದ್ದೇನೆ. ನಾವು ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು ಎಂದು ಡಿಸಿಎಂ ಡಿಕೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular