ಹಾಸನ : ಮನೆಯಲ್ಲಿ ನಿಗೂಡ ಸ್ಪೋಟ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಆಲೂರು ತಾಲೂಕಿನ ಹಳೇ ಆಲೂರು ಗ್ರಾಮದಲ್ಲಿ ಘಟನೆ ನಡೆದಿತ್ತು. ನಿಗೂಡ ಸ್ಪೋಟ ಸಂಭವಿಸಿ ದಂಪತಿ, ಮಗುವಿಗೆ ಗಂಭೀರ ಗಾಯಗಳಾಗಿತ್ತು.
ಮೃತರನ್ನ ಸುದರ್ಶನ್ ಆಚಾರ್ (32) ಹಾಗೂ ಅವರ ಪತ್ನಿ ಕಾವ್ಯ (27) ಎಂದು ಗುರುತಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಪೋಟಕ್ಕೆ ಕಾರಣ ತಿಳಿದು ಬಂದಿರಲಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು.