BREAKING : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಅಧ್ಯಕ್ಷ @kharge ಜಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಚೆನ್ನಾಗಿದ್ದಾರೆ ಮತ್ತು ನಿಮ್ಮೆಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಅವರು ಸಲಹೆಯಂತೆ ಶೀಘ್ರದಲ್ಲೇ ತಮ್ಮ ಚಟುವಟಿಕೆಗಳನ್ನು ಪುನರಾರಂಭಿಸಲು ಎದುರು ನೋಡುತ್ತಿದ್ದಾರೆ. ಎಲ್ಲರಿಗೂ ಅವರ ಶುಭ ಹಾರೈಕೆ ಮತ್ತು ಬೆಂಬಲಕ್ಕಾಗಿ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದ್ದರು.ಖರ್ಗೆ ಅವರಿಗೆ ಪೇಸ್ ಮೇಕರ್ ಅಳವಡಿಸಲು ಸೂಚಿಸಲಾಗಿದ್ದು, ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ಥಿರವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ. ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು ಎಂದು ಪ್ರಿಯಾಂಕ್ ಖರ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read