ಶಿವಮೊಗ್ಗ: ಹಳೆ ವೈಷಮ್ಯದ ಮೇಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಎನ್.ಟಿ. ರಸ್ತೆಯಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.
ಎನ್.ಟಿ. ರಸ್ತೆ ನಿವಾಸಿ ಅಮ್ಜದ್(38) ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ಇಬ್ಬರು ಹಲ್ಲೆ ಮಾಡಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಾಳು ಅಮ್ಜದ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾಹಿತಿ ತಿಳಿದ ಸಂಬಂಧಿಕರು ಹಾಗೂ ಯುವಕರು ಆಸ್ಪತ್ರೆಯ ಬಳಿ ಜಮಾಯಿಸಿದ್ದರು.
ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.