ಬೆಂಗಳೂರು : ರಾಜ್ಯದಲ್ಲಿ ಬರುವ ಎಲ್ಲಾ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಜೆಪಿ ಜೆಡಿಎಸ್ ಮೈತ್ರಿಗೆ ಯಾವುದೇ ತರಹದ ಆತಂಕ ಆಗುವುದಿಲ್ಲ. ಬಿಜೆಪಿ ಜೊತೆ ಮೈತ್ರಿ ಮುಂದುವರೆಯುತ್ತದೆ. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನಸಭೆ ಚುನಾವಣೆ ಸೇರಿ ಮುಂಬರುವ ಎಲ್ಲಾ ಚುನಾವಣೆಗಳಿಗೂ ನಾವು ಮೈತ್ರಿ ಮಾಡಿಕೊಳ್ಳಲಿದ್ದೇವೆ ಎಂದರು.
ಕಳೆದ 10 ವರ್ಷದಲ್ಲಿ ಮೋದಿ ಬಗ್ಗೆ ನಾನು ಲಘುವಾಗಿ ಮಾತನಾಡಿಲ್ಲ. ನನ್ನ ಹಾಗೂ ಅವರ ಸಂಬಂಧ ಬಹಳ ಚೆನ್ನಾಗಿದೆ. ಇದೇ ಮೈತ್ರಿಗೆ ಅಡಿಪಾಯ ಎಂದು ದೇವೇಗೌಡ ಹೇಳಿದ್ದಾರೆ.
ಕುಮಾರಸ್ವಾಮಿಗೆ ಆರೋಗ್ಯ ಸುಧಾರಣೆಯಾಗಬೇಕಿತ್ತು, ಸದ್ಯ ಸುಧಾರಿಸಿದೆ. ಕೆಲವೇ ದಿನಗಳಲ್ಲಿ ಅವರು ರಾಜ್ಯ ಪ್ರವಾಸ ಮಾಡುತ್ತಾರೆ ಎಂದರು.