ಕೊಪ್ಪಳ : ಕೊಪ್ಪಳದಲ್ಲಿ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ಪ್ರಕಟಿಸಿದೆ. ಸೂಕ್ತ ಸಾಕ್ಯಾಧಾರ ಸಿಗದ ಹಿನ್ನೆಲೆ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕಳೆದ 2015 ಜನವರಿ 11 ರಲ್ಲಿ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆಯಾಗಿತ್ತು.ಕೊಪ್ಪಳ ರೈಲು ನಿಲ್ದಾಣದ ಬಳಿ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆಯಾಗಿದ್ದ. ಮೊದಲು ಇದೊಂದು ಅಸಹಜ ಸಾವು ಇರಬಹುದು ಹೇಳಲಾಗಿತ್ತು, ನಂತರ ಇದೊಂದು ಅಸಹಜ ಸಾವು ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಬಯಲಾಗಿತ್ತು.