ಕಾರವಾರ: ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೋರ್ವ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಓಂ ಬೀಚ್ ನಲ್ಲಿ ನಡೆದಿದೆ.
ಶಿವಮೊಗ್ಗ ಮೂಲದ ಅಸ್ಲಾಂ (45) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಓಂ ಬೀಚ್ ಗೆ ಬಿದ್ದ ಅಸ್ಲಾಂ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದಿದ್ದಾರೆ. ಅಲೆಗಳ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಗೋರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.