BREAKING: ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಯಾದಗಿರಿ: ಯಾದಗಿರಿ ನಗರಸಭೆಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ನಗರಸಭೆ ಕಚೇರಿಯ ಬಿಲ್ ಕಲೆಕ್ಟರ್ ನರಸಪ್ಪ ಬಲೆಗೆ ಬಿದ್ದ ಅಧಿಕಾರಿ.

ಅವರು ಇ- ಖಾತೆ ಮಾಡಿಕೊಡಲು 8,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ನರಸಪ್ಪ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಶಿಕುಮಾರ್ ಎಂಬುವವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 5 ಸಾವಿರ ರೂ. ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read