HomeLatest NewsBREAKING: ಸಮೀಕ್ಷೆ ಮುಗಿಸಿ ಬರುತ್ತಿದ್ದ ಶಿಕ್ಷಕಿ ಬೈಕ್ ನಿಂದ ಬಿದ್ದು ಸಾವು

BREAKING: ಸಮೀಕ್ಷೆ ಮುಗಿಸಿ ಬರುತ್ತಿದ್ದ ಶಿಕ್ಷಕಿ ಬೈಕ್ ನಿಂದ ಬಿದ್ದು ಸಾವು

ಬಾಗಲಕೋಟೆ: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆದಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.

ಸಮೀಕ್ಷೆ ಕಾರ್ಯ ಮುಗಿಸಿ ಬರುವಾಗ ಶಿಕ್ಷಕಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾನಮ್ಮ ಯಡಹಳ್ಳಿ(51) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ನಿಂದ ಬಿದ್ದು ಶಿಕ್ಷಕಿ ದಾನಮ್ಮ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ತಾಲೂಕಿನ ಬೋಡನಾಯಕನದಿನ್ನಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ರಾಂಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ದಾನಮ್ಮ ಬೈಕ್ ನಿಂದ ಬಿದ್ದು ಮೃತಪಟ್ಟಿದ್ದಾರೆ. ಬಾಗಲಕೋಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular