HomeLatest Newsಎಂಬಿಎ, ಎಂಸಿಎ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ: ಪಿಜಿ...

ಎಂಬಿಎ, ಎಂಸಿಎ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ: ಪಿಜಿ ಮೆಡಿಕಲ್, ಡಿಪ್ಲೊಮಾ ಕೋರ್ಸು ಪ್ರವೇಶಕ್ಕೆ ಅರ್ಜಿ

ಬೆಂಗಳೂರು: MBA, MCA, ME, M.Tech, M.Arch ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಫಲಿತಾಂಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಅ.4ರಂದು ಮಧ್ಯಾಹ್ನ 1ಗಂಟೆ ಒಳಗೆ ಇ-ಮೇಲ್ ([email protected]) ಮೂಲಕ ತಿಳಿಸಬಹುದು. ಬಳಿಕ ಪರಿಶೀಲಿಸಿ, ಅ.4ರಂದೇ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.

PGNEET-25: PG Medical/ Diploma ಕೋರ್ಸು ಪ್ರವೇಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

PGNEET-25: PGMedical/ Diploma ಕೋರ್ಸುಗಳ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ.4ರಿಂದ (ಬೆ. 11) ಅ.9 (ಬೆಳಿಗ್ಗೆ 11) ರೊಳಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ನೀಟ್-ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯದಲ್ಲಿನ ಸ್ನಾತಕೋತ್ತರ ಡಿ ಎನ್ ಬಿ ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟಾ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿನ ಖಾಸಗಿ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ.

ನೋಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ ಪರಿಶೀಲನೆಗೆ ಸಲ್ಲಿಸಬೇಕಾದ ಮೂಲ ದಾಖಲಾತಿಗಳು, ಹಾಗೂ ಇತರೆ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ನಿಗದಿತ ಲಿಂಕ್ ಆಯ್ಕೆ ಮಾಡಿಕೊಂಡು ನೋಂದಣಿ ಮಾಡಿ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿಪಡಿಸುವ ದಿನಾಂಕಗಳಂದು ಅರ್ಹತೆಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗೆ https://cetonline.karnataka.gov.in/KEA/pgetmed2025 ನೋಡಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular