ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿ ನಗರದಲ್ಲಿ ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಿದ್ದಾರೆ.
ವೈದ್ಯರ ವಸತಿ ನಿಲಯ ಕಟ್ಟಡವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಹೈಟೆಕ್ ಸಿಟಿ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಆಸಿಫ್ ಸೇಠ್ ಸೇರಿದಂತೆ ಇತರರು ಸಾಥ್ ನೀಡಲಿದ್ದಾರೆ.