HomeKarnatakaSHOCKING: ಮಾರಕಾಸ್ತ್ರಗಳಿಂದ ಒಂಟಿ ಮಹಿಳೆ ಥಳಿಸಿ ಚಿನ್ನಾಭರಣ ಲೂಟಿ

SHOCKING: ಮಾರಕಾಸ್ತ್ರಗಳಿಂದ ಒಂಟಿ ಮಹಿಳೆ ಥಳಿಸಿ ಚಿನ್ನಾಭರಣ ಲೂಟಿ

ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ದಾವಣಗೆರೆ ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ನಡೆದಿದೆ.

ಮನೆಯಲ್ಲಿದ್ದ ಈರಮ್ಮ(60) ಅವರ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ. 16 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಾರಕಾಸ್ತ್ರಗಳಿಂದ ಈರಮ್ಮ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಪತಿ ಮನೆಗೆ ಬಂದಾಗ ಈರಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಈರಮ್ಮ ಅವರನ್ನು ದಾವಣಗೆರೆಯ ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಸ್ಥಳಕ್ಕೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪೋಲೀಸರು ಪರಿಶೀಲಿಸಿದ್ದಾರೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular