ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ನಡೆದಿದೆ. ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ಕಟ್ಟಡದಲ್ಲಿ ಮಾನವನ ಅಸ್ಥಿಪಂಜರ ಪತ್ತೆಯಾಗಿದೆ.
ಕಟ್ಟಡ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಅಸ್ಥಿಪಂಜರ ಪತ್ತೆಯಾಗಿದೆ. 6ರಿಂದ 8 ತಿಂಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಇದಾಗಿದೆ. ಅಪಾರ್ಟ್ ಮೆಂಟ್ ನ ೪ನೇ ಮಹಡಿಯಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.
ನಿನ್ನೆ ಅಪಾರ್ಟ್ ಮೆಂಟ್ ನ ಸೆಕ್ಯೂರಿಟಿ ಗಾರ್ಡ್ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಪೊಲೀಸರುಗೆ ಮಾಹಿತಿ ನೀಡಿದ್ದಾರೆ. ಕೊತ್ತನೂರು ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಗಬ್ಬಿಯ ಶ್ರೀಧರ್ ಎಂಬುವವರುಗೆ ಸೇರಿದ ಅಪಾರ್ಟ್ ಮೆಂಟ್ ಇದಾಗಿದೆ. ಮೇಲ್ನೋಟಕ್ಕೆ 35-40 ವರ್ಷದ ಪುರುಷನ ಅಸ್ಥಿಪಂಜರದಂತೆ ಕಂಡು ಬಂದಿದೆ. ಸದ್ಯ ಅಸ್ಥಿಪಂಜರವನ್ನು ಎಫ್ ಎಸ್ ಎಲ್ ಗೆ ರವಾನಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.