ಬೆಳಗಾವಿ: ಬೆಳಗಾವಿಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಉರುಸು ಮೆರವಣಿಗೆ ವೇಳೆ ಐ ಲವ್ ಮೊಹಮ್ಮದ್ ಘೋಷಣೆ ಕೂಗಲಾಗಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮುಸ್ಲಿಂ ಯುವಕರು ಹಿಂದೂಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಖಡಕ್ ಗಲ್ಲಿಯ ನಿವಾಸಿಗಳು ಬೆಳಗಾವಿ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ 10 ಜನರನ್ನು ಹೆಸರು ಉಲ್ಲೇಖಿಸಿ ಒಟ್ಟು 50 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗಾಗಲೇ 11 ಜನರನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ.