ಬೆಂಗಳೂರು : ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ಸಿರಪ್ ಕೊಡಬೇಡಿ ಎಂದು ಮಕ್ಕಳ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಕ್ಕಳ ತಜ್ಷ ಲಕ್ಷ್ಮೀಪತಿ ಹೇಳಿಕೆ ನೀಡಿದ್ದು, ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ಸಿರಪ್ ಕೊಡಬೇಡಿ. ಇದರಿಂದ ಕಿಡ್ನಿ, ಮೆದುಳಿಗೆ ತೊಂದರೆ ಆಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಈ ಕೆಮ್ಮಿನ ಸಿರಪ್ ಕುಡಿದು 11 ಮಕ್ಕಳು ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ರಿಲೀಸ್ ಮಾಡಿದೆ.
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಬಲಿಯಾಗಿದ್ದು, ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 2 ವರ್ಷದೊಳಗಿನ ಮಕ್ಕಳಿಗೆ ಶೀತ ಕೆಮ್ಮಿನ ಔಷಧ ನೀಡಬೇಡಿ. 5 ವರ್ಷದೊಳಗಿನ ಮಕ್ಕಳಿಗೆ ಕಾಫ್ ಸಿರಫ್ ನೀಡಬೇಕಾದ್ರೆ ಎಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದೆ. ಮೊದಲು ಹೈಡ್ರೇಷನ್ ಹಾಗೂ ರೆಸ್ಟ್ ಮಾಡುವುದು ಮೊದಲ ಆದ್ಯತೆ ಆಗಿರಬೇಕು ಎಂದು ಸೂಚನೆ ನೀಡಿದೆ.