HomeLatest Newsಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ : ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ : ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಬೇಕಾಗಿರುವುದರಿಂದ ಅರ್ಹ ಶಿಕ್ಷಕರಿಂದ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇ‍ತ್ರದ  ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

*ವೇಳಾಪಟ್ಟಿ:*

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

06.11.2025 (ಗುರುವಾರ): ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನ.

25.11.2025 (ಮಂಗಳವಾರ): ಕರಡು ಮತದಾರರ ಪಟ್ಟಿ ಪ್ರಕಟಿಸುವ ದಿನ.

25.11.2025 (ಮಂಗಳವಾರ) ರಿಂದ 10.12.2025 (ಬುಧವಾರ) ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗಧಿಪಡಿಸಿದ ಅವಧಿ.

30.12.2025 (ಮಂಗಳವಾರ): ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ದಿನ.

*ಹೆಸರು ನೋಂದಾಯಿಸಲು ಮಾರ್ಗಸೂಚಿ:*

ಭಾರತದ ಪ್ರಜೆಯಾಗಿರುವ, ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಮತದಾರರ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಟುಂಬ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬAಧಿಸಿದAತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳಬಹುದು.

ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವAತಹ ಅಥವಾ ಸತ್ಯವೆಂದು ನಂಬಲಾಗದಿರುವAತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷಗೆ ಗುರಿಪಡಿಸಲಾಗುವುದು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನವೆಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಭೋದನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿAದ ಅನುಬಂಧ – 2 ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.

ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತು ಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ.

ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಆಯೋಗವು ಮುಂಬರುವ ದಿನಗಳಲ್ಲಿ ನಮೂನೆ 19 ರ ಅರ್ಜಿಗಳನ್ನು ಇಆರ್‌ಎಂಎಸ್ (ಇಖಒS) ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪಣೆÀಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬAಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸಬಹುದಾಗಿದೆ.

ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular