ಬೆಂಗಳೂರು: ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಜೊತೆಗಿದ್ದವನೇ ವ್ಯಕ್ತಿಯನ್ನು ಕೊಲೆ ಮಾಡಿದ್ದಾನೆ. ಮಾರತ್ ಹಳ್ಳಿ ಸರ್ವಿಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಒಂಬತ್ತು ಗಂಟೆಗೆ ಘಟನೆ ನಡೆದಿದೆ.
ರಾಯಚೂರು ಮೂಲದ ಮಹಾದೇವ(65) ಎಂಬುವರನ್ನು ಕೊಲೆ ಮಾಡಲಾಗಿದೆ. ತಮಿಳುನಾಡಿನ ತಾಂಜವೂರು ಮೂಲದ ರಾಜು ಎಂಬಾತ ಕೊಲೆ ಮಾಡಿದ್ದಾನೆ. ಹರಿತವಾದ ಆಯುಧದಿಂದ ಮಹಾದೇವ ಹೊಟ್ಟೆಗೆ ಇರಿದು ಕೊಲೆ ಮಾಡಲಾಗಿದೆ.
ಇಬ್ಬರೂ ಮಾರತ್ ಹಳ್ಳಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿ ನಡೆದ ಜಗಳದ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ರಾಜುನನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾರತ್ ಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಆಘಾತಕಾರಿ ಕೃತ್ಯ