ಬೆಂಗಳೂರು: ಹಿರಿಯ ನಾಗರಿಕರು ವಿಕಲಚೇತನರು ಪಡಿತರ ಪಡೆಯಲು ಬಯೋಮೆಟ್ರಿಕ್ ನಿಂದ ವಿನಾಯಿತಿ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹಿರಿಯ ನಾಗರಿಕರು ಮತ್ತು ಅಂಗವಿಕಲರ ಬೆರಳುಗಳ ಚರ್ಮ ಸುಕ್ಕು ಕಟ್ಟಿರುವುದರಿಂದ ಪಡಿತರ ಪಡೆಯಲು ಕಷ್ಟವಾಗುತ್ತಿದೆ. ಹೀಗಾಗಿ ಅವರಿಗೆ ಬಯೋಮೆಟ್ರಿಕ್ ನಿಂದ ವಿನಾಯಿತಿ ನೀಡಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧರಿಸಿ ಪಡಿತರ ವಿತರಿಸಬೇಕೆಂದು ಮನವಿ ಮಾಡಿದ್ದಾರೆ.
ಮಹಿಳೆಯರ ಹೆಸರಿನಲ್ಲಿ ಮಾಡಿಸುವ ಆಸ್ತಿ ನೋಂದಣಿಗೆ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.
ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾರ್ಮಿಕ ಇಲಾಖೆ ಆಯುಕ್ತರು ಮತ್ತು ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ ನಿರ್ದೇಶಕರು, ಆಡಳಿತ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.