ಚಾಮರಾಜನಗರ: ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಪಚ್ಚಮಲ್ಲ ಅಲಿಯಾಸ್ ಸಣ್ಣ ಬಂಧಿತ ಆರೋಪಿಯಾಗಿದ್ದಾನೆ. ಹನೂರು ತಾಲೂಕು ಪಚ್ಚಮಲ್ಲ ಗ್ರಾಮದ ನಿವಾಸಿಯಾಗಿದ್ದಾನೆ. ಪಚ್ಚಮಲ್ಲನ ನಾಲ್ವರು ಸಹಚರರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಗಣೇಶ, ಗೋವಿಂದೇಗೌಡ ಹಾಗೂ ಮಂದೆ ಕುರಿ ಮೇಯಿಸುತ್ತಿದ್ದ ಮಂಜುನಾಥ, ಕಂಬಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.
ಪಚ್ಚಮಲ್ಲನ ಹಸುವನ್ನು ಹುಲಿ ಬೇಟೆಯಾಡಿ ಕೊಂದು ಭಕ್ಷಣೆ ಮಾಡಿದ್ದು, ತಾನು ಸಾಕಿದ ಹಸುವನ್ನು ಕೊಂದಿದ್ದಕ್ಕೆ ಪಚ್ಚಮಲ್ಲ ರೊಚ್ಚಿಗೆದ್ದಿದ್ದ. ಹುಲಿಗೆ ಒಂದು ಗತಿ ಕಾಣಿಸಲೇಬೇಕೆಂದು ಸ್ಕೆಚ್ ಹಾಕಿದ್ದ. ಗೋವಿಂದೇಗೌಡ, ಮಂಜುನಾಥ, ಕಂಬಣ್ಣ, ಗಣೇಶನ ಜೊತೆ ಸೇರಿ ಸಂಚು ರೂಪಿಸಿದ್ದ. ಹುಲಿಗೆ ಮಾಂಸದಲ್ಲಿ ವಿಷ ಹಾಕಿ ಕೊಂದು ಹಾಕಿದ್ದರು. ನಂತರ ಕೊಡಲಿಯಿಂದ ಹುಲಿಯನ್ನು ಮೂರು ಭಾಗಗಳಾಗಿ ತುಂಡರಿಸಿದ್ದರು. ಸದ್ಯ ಆರೋಪಿಗಳನ್ನು ಅರಣ್ಯ ಸಿಬ್ಬಂದಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.