ಜೈಪುರ: ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ್ದ 11 ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರದಲ್ಲಿ ಮತ್ತೊಂದು ಘಟನೆ ನಡೆದಿದೆ.
ಕೆಮ್ಮಿನ ಸಿರಪ್ ಸೇವಿಸಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದು ಕೆಮ್ಮಿನ ಸಿರಪ್ ನೀಡಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು. ಇದರಿಂದ ಮತ್ತಷ್ಟು ಬಾಲಕನ ಆರೋಗ್ಯ ಹದಗೆಟ್ಟಿತ್ತು. ಬಾಲಕನನ್ನು ಚುರುವಿನ ಜೆಕ್ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ತೀವ್ರ ಮೆದುಳುಜ್ವರದಿಂದ ಬಳಲುತ್ತಿದ್ದ ಬಾಲಕ ಅದೇ ದಿನ ಬೆಳಿಗ್ಗೆ 10 ಗಂಟೆಗೆ ಕೊನೆಯುಸಿರೆಳೆದಿದ್ದಾನೆ.