ತ್ರಿಶೂರ್: ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಮಗ, ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ.
ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಇದೇ ರೀತಿ ಮತ್ತೆ ತಂದೆ-ಮಗ ಜಗಳ ಮಾಡಿಕೊಂಡಿದ್ದು, ಈ ಬಾರಿ ಮಗ ತಂದೆಯ ಮೇಲೆ ಮಚ್ಚು ಬೀಸಿದ್ದಾನೆ. ಬಳಿಕ ಮನೆಯ ಡೋರ್ ಲಾಕ್ ಮಾಡಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆದರಿಸಿದ್ದಾನೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಮಗನನ್ನು ವಶಕ್ಕೆ ಪಡೆದಿದ್ದಾರೆ. ಶಿವನ್ ಮಗನಿಂದ ಹಲ್ಲೆಗೊಳಗಾದ ತಂದೆ. ಶಿವನ್ ಆಟೋ ಚಾಲಕನಾಗಿದ್ದು, ಮಗ ವಿಷ್ಣು ಹಾಗೂ ಶಿವನ್ ನಡುವೆ ಆಸ್ತಿ ವಿಚಾರವಾಗಿ ಜಗಳ ನಡೆದಿತ್ತು.