HomeLatest Newsನವೆಂಬರ್ ನಲ್ಲಿ ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಸ್ಥಾನ, ಡಿಕೆಶಿ ಸಿಎಂ ಆಗಲು ನನ್ನ ವಿರೋಧವಿಲ್ಲ:...

ನವೆಂಬರ್ ನಲ್ಲಿ ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಸ್ಥಾನ, ಡಿಕೆಶಿ ಸಿಎಂ ಆಗಲು ನನ್ನ ವಿರೋಧವಿಲ್ಲ: ರಾಯರೆಡ್ಡಿ

ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾಲಿ ಇಲ್ಲ, ಖಾಲಿ ಆಗುವುದಿಲ್ಲ ಎಂದು ಕೊಪ್ಪಳದಲ್ಲಿ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ರಾಜ್ಯದಲ್ಲಿ ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಕುರಿತಂತೆ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಗಲಿ. ನಾನೂ ಮುಖ್ಯಮಂತ್ರಿಯಾಗುವೆ. ನಾನೇನು ಕಮ್ಮಿನಾ? ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಆದರೆ ತಪ್ಪೇನು? ಅದರಲ್ಲಿ ತಪ್ಪೇನಿದೆ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ಅಭ್ಯರ್ಥಿ. ರಾಹುಲ್ ಗಾಂಧಿ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿ ಆಗಲಿ. ಯಾರು ಪ್ರಧಾನಿ ಆಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಬೇರೆ ಯಾರನ್ನಾದರೂ ಪ್ರಧಾನಿ ಮಾಡಿದರೆ ಖರ್ಗೆ ಆಗಲಿ. ದೇಶದಲ್ಲಿ ಮುಂದಿನ ಬಾರಿ ನಮ್ಮವರೇ ಪ್ರಧಾನಮಂತ್ರಿಯಾಗುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ ಕ್ರಾಂತಿಯ ಬಗ್ಗೆ ಓದಿಲ್ಲ. ನವೆಂಬರ್ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು. ಸಂಪುಟ ಪುನರ್ ರಚನೆಯ ವೇಳೆ ಹೊಸಬರಿಗೆ ಸ್ಥಾನ ಸಿಗಲಿದೆ. ಎರಡೂವರೆ ವರ್ಷ ಹೊಸಬರಿಗೆ ಅವಕಾಶ ಸಿಕ್ಕರೆ ತಪ್ಪೇನಿಲ್ಲ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ನನ್ನ ವಿರೋಧವಿಲ್ಲ. ಸದ್ಯ ಈ ವಿಚಾರದ ಬಗ್ಗೆ ಮಾತನಾಡಿದರೆ ನೋಟಿಸ್ ಕೊಡುತ್ತಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular