HomeLatest NewsBREAKING: ಬೆಂಗಳೂರಿನಲ್ಲಿ ಆನ್ ಲೈನ್ ಗೇಮಿಂಗ್ ಕಂಪನಿ ಧ್ವಂಸ

BREAKING: ಬೆಂಗಳೂರಿನಲ್ಲಿ ಆನ್ ಲೈನ್ ಗೇಮಿಂಗ್ ಕಂಪನಿ ಧ್ವಂಸ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್ ಲೈನ್ ಗೇಮಿಂಗ್ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.

ಕೋರಮಂಗಲದಲ್ಲಿರುವ ಗೋಲ್ಡನ್ ಏಸಸ್ ಎಂಬ ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು ಹಾಕಿ ಧ್ವಂಸ ಮಾಡಿದ್ದಾರೆ.

ಗ್ರಾಹಕರು ಆನ್ ಲೈನ್ ಬೆಟ್ಟಿಂಗ್ ಆಡುತ್ತಿದ್ದಾಗಲೇ ದಾಳಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಆನ್ ಲೈನ್ ಗೇಮಿಂಗ್ ಕಂಪನಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳು ಆನ್ ಲೈನ್ ಗೇಮಿಂಗ್, ಬೆಟ್ಟಿಂಗ್ ಕಂಪನಿಗಳನ್ನು ನಿಷೇಧಿಸಿವೆ.ಆದಾಗ್ಯೂ ಅಕ್ರಮವಾಗಿ ಆನ್ ಲೈನ್ ಬೆಟ್ಟಿಂಗ್ ದಂಧೆ ಇಲ್ಲಿ ನಡೆಸಲಾಗುತ್ತಿದ್ದು, ಯುವಕರು ಬಲಿಯಾಗುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಇಂತಹ ಕಂಪನಿಗಳು ಮಾಡುತ್ತಿವೆ ಎಂದು ಕಾರ್ಯಕರ್ತರು ಕಿಡಿಕಾರಿದ್ದಾರೆ. ಪ್ರತಿ ಭಾನುವಾರದಂದು ಗೋಲ್ಡನ್ ಏಸಸ್ ಗೇಮಿಂಗ್ ಕಂಪನಿಯಲ್ಲಿ ಅಕ್ರಮವಾಗಿ ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular