ಚಿಕ್ಕಮಗಳೂರು: ಬಾಲಕನೊಬ್ಬ ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ವಿಜಯಪುರ ಬಡಾವಣೆಯಲ್ಲಿ 16 ವರ್ಷದ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್ ಸ್ಪ್ರೇ ಮಾಡಿ ಬೆಂಕಿ ಹಚ್ಚಿದ್ದಾನೆ. ಬಾಲಕನ ಕೃತ್ಯ ಕಂಡ ಸ್ಥಳೀಯರು ಆತನನ್ನು ಥಳಿಸಿ ಪೊಲೀಸ್ ಠಾಣೆಗೆ ಎಳೆದೊಯ್ದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕನ ವಿರುದ್ಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಮಗನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದಕ್ಕೆ ಬಾಲಕನ ತಾಯಿ ಕೂಡ ದೂರು ನೀಡಿದ್ದಾರೆ. ಬಾಲಕನ ಹುಚ್ಚಾಟದ ಮನಸ್ಥಿತಿ ಎಂತವರನ್ನೂ ಆತಂಕಕ್ಕೀಡು ಮಾಡುವಂತಿದೆ.