ಚಿಕ್ಕಬಳ್ಳಾಪುರ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಪವನ್ ಕಲ್ಯಾಣ್ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಚಿಂತಾಮಣಿಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪವನ್ ಕಲ್ಯಾಣ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಪವನ್ ಕಲ್ಯಾಣ್ ಆಗಮನ ಹಿನ್ನೆಲೆಯಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.
ಬಿಗಿ ಭದ್ರತೆ ಕೈಗೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಈಗಾಗಲೇ ಮೂರು ಸಭೆ ನಡೆಸಿ ಕ್ರಮ ಕೈಗೊಂಡಿದೆ. ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಸ್ಪೋಟಕ ವಸ್ತು, ಮಾದಕ ದ್ರವ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.