BREAKING: ತಡರಾತ್ರಿ ಜೈಪುರ ಆಸ್ಪತ್ರೆ ಐಸಿಯುನಲ್ಲಿ ಭಾರೀ ಬೆಂಕಿ: 6 ರೋಗಿಗಳು ಸಾವು

ಜೈಪುರ: ಭಾನುವಾರ ತಡರಾತ್ರಿ ಜೈಪುರದ ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ರಾಮಾ ಸೆಂಟರ್ ಕಟ್ಟಡದ ಎರಡನೇ ಮಹಡಿಯಲ್ಲಿರುವ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಸಮಯದಲ್ಲಿ, ಐಸಿಯುನಲ್ಲಿ 11 ರೋಗಿಗಳು ದಾಖಲಾಗಿದ್ದರು. ಅವರಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ ಎಂದು ಟ್ರಾಮಾ ಸೆಂಟರ್‌ನ ಉಸ್ತುವಾರಿ ಡಾ. ಅನುರಾಗ್ ಧಾಕಡ್ ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಪ್ರಾಥಮಿಕ ಕಾರಣ ಎಂದು ಅವರು ಹೇಳಿದರು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read