HomeLatest Newsಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ, ಸಾರಿಗೆ ಸೇರಿ ಸರ್ಕಾರಿ ಇಲಾಖೆ, ನಿಗಮ- ಮಂಡಳಿಗಳಲ್ಲಿ ಖಾಲಿ...

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕೃಷಿ, ಸಾರಿಗೆ ಸೇರಿ ಸರ್ಕಾರಿ ಇಲಾಖೆ, ನಿಗಮ- ಮಂಡಳಿಗಳಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: ಸರ್ಕಾರಿ ಇಲಾಖೆಗಳು, ನಿಗಮ/ ಮಂಡಳಿಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ಸರ್ಕಾರ ನಿಗದಿಪಡಿಸಿದ ಅರ್ಹತಾ ಮಾನದಂಡಗಳಿಗೆ ಈ ನೇಮಕಾತಿ ಬಳಪಟ್ಟಿದೆ. ವಿವಿಧ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ(http://kea.kar.nic.in) ಸೂಚಿಸಿರುವ ಲಿಂಕ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಒಮ್ಮೆ ಸಲ್ಲಿಸಿದ ಅರ್ಜಿಯಲ್ಲಿನ ಮಾಹಿತಿಯನ್ನು ಯಾವುದೇ ಹಂತದಲ್ಲಿ ಬದಲಾವಣೆ ಅಥವಾ ತಿದ್ದುಪಡಿ ಮಾಡಲು ಅವಕಾಶ ಇರುವುದಿಲ್ಲ. ಮೊದಲ ಒಂದು ಹುದ್ದೆಯ ಅರ್ಜಿಗೆ ನಿಗದಿತ ಶುಲ್ಕ ಪಾವತಿಸಬೇಕು. ಹೆಚ್ಚುವರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಲ್ಲಿ ಆಯ್ಕೆ ಮಾಡಲದ ಪ್ರತಿ ಹೆಚ್ಚುವರಿ ಹುದ್ದೆಯ ಅರ್ಜಿಗೆ 100 ರೂಪಾಯಿ ಶುಲ್ಕ ಪಾವತಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಸೂಚನೆಯಲ್ಲಿ ತಿಳಿಸಿದ ಹುದ್ದೆಗಳ ಸಂಖ್ಯೆ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನೇಮಕಾತಿ ಪ್ರಾಧಿಕಾರಗಳು, ಪರೀಕ್ಷಾ ದಿನಾಂಕಕ್ಕೆ ಮುಂಚಿತವಾಗಿ ಬದಲಾವಣೆ ಬಯಸಿದಲ್ಲಿ ಮಾತ್ರ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗುವುದು.

ಕೃಷಿ ಮಾರಾಟ ಇಲಾಖೆ 180, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 40, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ 63, ತಾಂತ್ರಿಕ ಶಿಕ್ಷಣ ಇಲಾಖೆ 50, ಸೇರಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ., ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ)ಯಲ್ಲಿನ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular