ಕವರ್ಧಾ: ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಎಸ್ಯುವಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ನೆರೆಯ ಮಧ್ಯಪ್ರದೇಶದ ಕನ್ಹಾ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಕೋಲ್ಕತ್ತಾಗೆ ರೈಲು ಹತ್ತಲು ಬಿಲಾಸ್ ಪುರಕ್ಕೆ ಹಿಂತಿರುಗುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಿಲ್ಪಿ ಪೊಲೀಸ್ ಠಾಣೆ ವ್ಯಾಪ್ತಿಯ ಅಕಲ್ಘರಿಯಾ ಗ್ರಾಮದ ಬಳಿ ಬೊಲೆರೊ ಎಂಬ ಎಸ್ಯುವಿ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಚಾಲಕ ಸೇರಿದಂತೆ 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರು ಹುಡುಗಿಯರನ್ನು ಕವರ್ಧಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡ ವ್ಯಕ್ತಿಯನ್ನು ಬೋಡ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ವ್ಯಕ್ತಿಗಳನ್ನು ರಾಯ್ಪುರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.