ಬೆಂಗಳೂರು : ಬೆಂಗಳೂರಿನಲ್ಲಿ ಬೃಹತ್ ಮರ ಬಿದ್ದು ಯುವತಿ ದುರ್ಮರಣಕ್ಕೀಡಾಗಿದ್ದು, ಹಲವರಿಗೆ ಗಾಯಗಳಾಗಿದೆ.
ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅರಳಿ ಮರದ ಬೃಹತ್ ರೆಂಬೆ ಬಿದ್ದು ಯುವತಿ ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ (23) ಎಂದು ಗುರುತಿಸಲಾಗಿದೆ.
ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ನೋಡಲು ಕೀರ್ತನಾ ತೆರಳಿದ್ದರು. ಕ್ರಿಕೆಟ್ ನೋಡಿ ಸ್ನೇಹಿತೆ ಜೊತೆ ಬೈಕ್ ನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಬೈಕ್ ನಲ್ಲಿ ಬರುತ್ತಿದ್ದ ಕೀರ್ತನಾ ಸ್ನೇಹಿತೆಯರು ಮರದ ರೆಂಬೆ ಬಿದ್ದು ಗಾಯಗೊಂಡಿದ್ದಾರೆ. ಈ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.