HomeLatest NewsGOOD NEWS : ರಾಜ್ಯದಲ್ಲಿ ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ...

GOOD NEWS : ರಾಜ್ಯದಲ್ಲಿ ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ವಯೋಮಿತಿ ಸಡಿಲಿಕೆ ಬಗ್ಗೆ ಬೇರೆ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದೇವೆ, ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

ಜಾತಿಗಣತಿ ಸಮೀಕ್ಷೆ ಕುರಿತು ಮಾತನಾಡಿದ ಸಚಿವರು ಮುಖ್ಯಮಂತ್ರಿಗಳು ಕೊಪ್ಪಳದಿಂದ ವಾಪಸ್ ಆದ ಬಳಿಕ ಅಧಿಕಾರಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಸಮೀಕ್ಷೆ ಪ್ರಗತಿ ಶೇ. 70-80ರಷ್ಟಾಗಿದೆ. ತಾಂತ್ರಿಕ ಹಾಗೂ ಗಣತಿದಾರರ ಗೊಂದಲದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.
ಸರ್ಕಾರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಹಿಂದಿನ ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular