HomeLatest NewsBIG NEWS : ರಾಜ್ಯದಲ್ಲಿ 'ಜಾತಿಗಣತಿ ಸಮೀಕ್ಷೆ' ಅವಧಿ ವಿಸ್ತರಣೆ ಸಾಧ್ಯತೆ : ಗೃಹ ಸಚಿವ...

BIG NEWS : ರಾಜ್ಯದಲ್ಲಿ ‘ಜಾತಿಗಣತಿ ಸಮೀಕ್ಷೆ’ ಅವಧಿ ವಿಸ್ತರಣೆ ಸಾಧ್ಯತೆ : ಗೃಹ ಸಚಿವ ಜಿ. ಪರಮೇಶ್ವರ್ ಸುಳಿವು

ಬೆಂಗಳೂರು: ಸಾಮಾಜಿಕ , ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ-ಜಾತಿಗಣತಿ ಸಮೀಕ್ಷೆಗೆ ನಾಳೆಯೇ ಕೊನೆಯ ದಿನವಾಗಿದೆ. ಆದರೆ ನಾಳೆಗೆ ಗಣತಿ ಮುಗಿಯುವುದಿಲ್ಲ. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸುವ ಸಾಧ್ಯತೆ ಇದೆ.

ಜಾತಿ ಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸಿದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಮುಖ್ಯಮಂತ್ರಿಗಳು ಕೊಪ್ಪಳದಿಂದ ವಾಪಸ್ ಆದ ಬಳಿಕ ಅಧಿಕಾರಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಸಮೀಕ್ಷೆ ಪ್ರಗತಿ ಶೇ. 70-80ರಷ್ಟಾಗಿದೆ. ತಾಂತ್ರಿಕ ಹಾಗೂ ಗಣತಿದಾರರ ಗೊಂದಲದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಣ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ ಹಿಂದಿನ ಸಮೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular