ಹಾಸನ : ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೊಸೂರಿನಲ್ಲಿ ನಡೆದಿದೆ.
ಮೃತರನ್ನು ಪ್ರಣಯ್ (7 ) ನಿಶಾಂತ್ (5) ಎಂದು ಗುರುತಿಸಲಾಗಿದೆ. ಹೊಸೂರಿನ ಐಬಿಸಿ ಕಾಫಿ ಎಸ್ಟೇಟ್ ನಲ್ಲಿರುವ ನೀರಿನ ಹೊಂಡದಲ್ಲಿ ಈ ಘಟನೆ ನಡೆದಿದೆ.
ಮೃತ ಬಾಲಕರ ಪೋಷಕರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡುತ್ತಾ ನೀರಿನ ಹೊಂಡದ ಬಳಿ ಹೋದ ಮಕ್ಕಳು ಆಕಸ್ಮಾತ್ ಆಗಿ ಬಿದ್ದು ಮೃತಪಟ್ಟಿದ್ದಾರೆ.