ಬೆಂಗಳೂರು: ಬೆಂಗಳೂರಿನಲ್ಲಿ 10 ಲಕ್ಷ ಮೌಲ್ಯದ 10 ಕೆ.ಜಿ ಗಾಂಜಾವನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ ತಪ್ಪಿಸಿಕೊಂಡಿದ್ದಾನೆ.
ಹಲಸೂರು ಗೇಟ್ ಪೊಲೀಸರು ಆರೋಪಿ ಕುಶಾಲ್ ನನ್ನು ಬಂಧಿಸಿದ್ದಾರೆ. ಕುಶಾಲ್ ಮತ್ತೋರ್ವ ವ್ಯಕ್ತಿಯಿಂದ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದ. ಕೆ.ಜಿ ರಸ್ತೆಯ ಫುಟ್ ಪಾತ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ. ಈ ವೇಳೆ ಆರೋಪಿ ಕುಶಾಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕುಶಾಲ್ ಬಳಿ ಇದ್ದ ಒಂದು ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಮತ್ತೋರ್ವ ವ್ಯಕ್ತಿ ಮನೆಯಲ್ಲಿದ್ದ 9 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಬಲೆ ಬೀಸಲಾಗಿದೆ.