ಬೆಂಗಳೂರು: ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಮಂತ್ರಿ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಶಾಸಕ ನರೇಂದ್ರಸ್ವಾಮಿ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.
ಹಿರಿಯನಾಗಿ ನಾನೂಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ. ಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಮಾಡಲು ಯಾರಿಗೂ ಅವಕಾಶವಿಲ್ಲ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದರು.