ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾನ್ಸ್ ಟೇಬಲ್ ಗಂಭೀರವಾಗಿ ಗಾಯಗೊಂಡಿರುವ ಘಟನ್ಎ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ.
ಐಮಂಗಲ ಪೊಲೀಸ್ ತರಬೇತಿ ಶಾಲೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೆಳಗಾವಿಯ ಪೊಲೀಸ್ ಕಾನ್ಸ್ ಟೇಬಲ್ ಸಂಗಮೇಶ್ (29)) ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸಂಗಮೇಶ್ ಅವರ ಕಾಲು, ತಲೆ ಹಾಗೂ ಮುಖಕ್ಕೆ ತೀವ್ರವಾದ ಪೆಟ್ಟಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಐಮಂಗಲ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.