BREAKING : ರಾಜ್ಯದಲ್ಲಿ ‘ಜಾತಿ ಗಣತಿ’ ಸಮೀಕ್ಷೆ ಅವಧಿ ವಿಸ್ತರಣೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

ಬೆಂಗಳೂರು : ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ.
ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read