HomeLatest NewsBREAKING: ದರ್ಶನ್ ಅರ್ಜಿ ವಿಚಾರಣೆ ಅಕ್ಟೋಬರ್ 9ಕ್ಕೆ ಮುಂದೂಡಿಕೆ

BREAKING: ದರ್ಶನ್ ಅರ್ಜಿ ವಿಚಾರಣೆ ಅಕ್ಟೋಬರ್ 9ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದೆ.

ದರ್ಶನ್ ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದುಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್ ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಕೋರಿ ಸಿಆರ್ ಪಿಸಿ ಸೆಕ್ಷನ್ 310ರ ಅಡಿ ದರ್ಶನ್ ಪರ ವಕೀಲ ಸುನೀಲ್ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದರು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular