ಕೊಪ್ಪಳ : ರಾಜ್ಯದಲ್ಲಿ ಕೆಮ್ಮಿನ ಔಷಧಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

