ದಾವಣಗೆರೆ: ತುಂಗಭದ್ರಾ ನದಿಯಲ್ಲಿ ತೆಪ್ಪ ಮಗುಚಿ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತದರನ್ನು ಹೊನ್ನಾಳಿ ಪಟ್ಟಣದ ತಿಪ್ಪೇಶ್ (25) ಹಾಗೂ ಮುಕ್ತಿಯಾರ್ (19) ಎಂದು ಗುರುತಿಸಲಾಗಿದೆ. ಇಬ್ಬರನ್ನು ರಕ್ಷಿಸಲಾಗಿದೆ. ಮೀನು ಹಿಡಿಯಲು ಹೋಗಿ ತೆಪ್ಪ ನದಿಯಲ್ಲಿ ಮಗುಚಿ ಬಿದ್ದು ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ನದಿಯಲ್ಲಿ ಮೃತದೇಹಗಳಿಗಾಗಿ ಶೋಧ ನಡೆಸಲಾಗುತ್ತಿದೆ.