ಕೊಪ್ಪಳ: ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಎಂಬ ವಿಪಕ್ಷ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದಿದ್ದಾರೆ.
ಕೊಪ್ಪಳ ಜಿಲ್ಲೆಯ ಬಸಾಪುರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ಬಿಜೆಪಿ ನಾಯಕರು ಅನಗತ್ಯ ಹೇಳಿಕೆ ಕೊಟ್ಟು ರಾಜಕೀಯ ಮಾಡುತ್ತಿದ್ದಾರಷ್ಟೇ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಮಂಗಳವಾರ ಮುಗಿಯಲಿದೆ. ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು. ನಾಳೆ ಸಂಜೆಯವರೆಗೆ ಕಾದುನೋಡುತ್ತೇವೆ ಎಂದರು.