ಕೋಲಾರ: ಸೇತುವೆ ಮೇಲಿನಿಂದ ಕಾರೊಂದು ಕೆಳಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ಕೃಷ್ಣಾವರಂ ಬಳಿ ನಡೆದಿದೆ.
ಕರ್ಣ (48) ಮೃತ ದುರ್ದೈವಿ. ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿನಿಂದ ಕೆಳಗೆ ಬಿದ್ದಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಮೆಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.