ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ 440 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಮುಡಾ ಹಗರಣದಲ್ಲಿ ಅಧಿಕಾರಿಗಳೇ ಭಾಗಿಯಾಗಿರುವುದು ಸಾಬೀತಾಗಿದೆ. ಅಕ್ರಮವಾಗಿ ಹಂಚಿಕೆಯಾಗಿದ್ದ 440 ಕೋಟಿ ರೂಪಾಯಿ ಮೌಲ್ಯದ 252 ನಿವೇಶನಗಳನ್ನು ಇಡಿ ಮುಟ್ತುಗೋಲು ಹಾಕಿಕೊಂಡಿದೆ.
ಅಕ್ರಮವಾಗಿ ಸೈಟ್ ಹಂಚಿಕೆ ಮಾಡಿದ್ದ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿಯ 40.8 ಕೋಟಿ ರೂ ಮೌಲ್ಯದ 32 ನಿವೇಶನಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ ದಿನೇಶ್ ಕುಮಾರ್ ಈ ಆಸ್ತಿ ಮಾಡಿದ್ದರು. ಇತ್ತೀಚೆಗಷ್ಟೇ ಇಡಿ ಅಧಿಕಾರಿಗಳು ದಿನೇಶ್ ಕುಮಾರ್ ಅವರನ್ನು ಬಂಧಿಸಿದ್ದರು.